ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಮನೆ ಮೇಲೆ ಸಿಸಿಬಿ ದಾಳಿ: ₹ 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Published 8 ಏಪ್ರಿಲ್ 2024, 15:52 IST
Last Updated 8 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಬಗ್ಗೆ ಮಾಹಿತಿ ಬಂದಿದ್ದರಿಂದ, ಬಾಗಲಗುಂಟೆ ಬಳಿಯ ಮನೆಯೊಂದರ ಮೇಲೆ ಏಪ್ರಿಲ್ 6ರಂದು ದಾಳಿ ಮಾಡಲಾಯಿತು. ಡ್ರಗ್ಸ್ ಮಾರಾಟ ಆರೋಪದಡಿ ನೈಜೀರಿಯಾದ ಹೆನ್ರಿ ಚುಕ್ವುಮೆಕಾ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.

‘2020ರಲ್ಲಿ ಬೆಂಗಳೂರಿಗೆ ಬಂದಿದ್ದ ಹೆನ್ರಿ, ಬಾಗಲಗುಂಟೆ ಬಳಿಯ ಮನೆಯೊಂದರಲ್ಲಿ ಬಾಡಿಗೆಗೆ ವಾಸವಿದ್ದ. ವಿದೇಶದಲ್ಲಿ ನೆಲೆಸಿರುವ ತನ್ನ ಸ್ನೇಹಿತರಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ಆರೋಪಿ, ಮನೆಯಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಮಾರುತ್ತಿದ್ದ.’

‘ಆರೋಪಿ ಹಲವು ವರ್ಷಗಳಿಂದ ಡ್ರಗ್ಸ್ ಮಾರುತ್ತಿದ್ದನೆಂದು ಗೊತ್ತಾಗಿದೆ. ಈತನಿಂದ 4 ಕೆ.ಜಿ. ತೂಕದ ಎಂಡಿಎಂಎ ಜಪ್ತಿ ಮಾಡಲಾಗಿದೆ. ಈತ ₹ 8 ಸಾವಿರದಿಂದ ₹ 10 ಸಾವಿರಕ್ಕೆ 1 ಗ್ರಾಂ ಎಂಡಿಎಂಎ ಮಾರುತ್ತಿದ್ದನೆಂಬ ಮಾಹಿತಿ ಇದೆ’ ಎಂದರು.

ಬಾಬಾಜ್ಯೋತಿ
ಬಾಬಾಜ್ಯೋತಿ

‘ಡೆಲಿವರಿ ಬಾಯ್ ಕೆಲಸ ಬಿಟ್ಟು ಡ್ರಗ್ಸ್ ಮಾರಾಟ’

‘ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಆರೋಪಿ ಬಾಬಾಜ್ಯೋತಿ ಡೋಲೆ ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ ₹ 10 ಲಕ್ಷ ಮೌಲ್ಯದ ಗಾಂಜಾ ಮೊಬೈಲ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಅಸ್ಸಾಂನ ಬಾಬಾಜ್ಯೋತಿ 12 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ. ಭದ್ರತಾ ಸಿಬ್ಬಂದಿ ಆಗಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ಅಲ್ಲಿಯ ಕೆಲಸಕ್ಕೆ ರಾಜೀನಾಮೆ ನೀಡಿ ಡೆಲಿವರಿ ಬಾಯ್ ಆಗಿದ್ದ. ಕೆಲ ತಿಂಗಳ ಹಿಂದೆಯಷ್ಟೇ ಡೆಲಿವರಿ ಬಾಯ್ ಕೆಲಸ ಬಿಟ್ಟಿದ್ದ ಈತ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT