ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಿಂಗ್, ವೇಶ್ಯಾವಾಟಿಕೆ ದಂಧೆ– ಸಿಸಿಬಿ ದಾಳಿ

Last Updated 9 ಡಿಸೆಂಬರ್ 2020, 21:04 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ಹಾಗೂ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ತಾಣಗಳಿಗೆ ಸಿಸಿಬಿ ಪೊಲೀಸರು ಪ್ರತ್ಯೇಕ ದಾಳಿ ನಡೆಸಿದ್ದಾರೆ.

'ರಾಮಮೂರ್ತಿನಗರದಲ್ಲಿ ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ. ದಂಧೆ ನಡೆಸುತ್ತಿದ್ದವರ ವಿರುದ್ಧ 'ವಿದೇಶಿಯರ ಕಾಯ್ದೆ'ಯಡಿ ಕ್ರಮ ಕೈಗೊಳ್ಳಲಾಗುವುದು' ಎಂದುಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ ತಿಳಿಸಿದ್ದಾರೆ.

₹4.5 ಲಕ್ಷ ಜಪ್ತಿ: ಕ್ರಿಕೆಟ್ ಬೆಟ್ಟಿಂಗ್‍ನಲ್ಲಿಸೋತವರಿಂದ ಹಣ ಪಡೆಯಲು ನಗರದ ರಾಮದಾಸ್ ಹೋಟೆಲ್‌ಗೆ ಬಂದಿದ್ದ ಪ್ರಭು ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

'ಶ್ರೀಲಂಕಾದಲ್ಲಿ ಮಂಗಳವಾರ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ವೆಬ್‍ಸೈಟ್ ಹಾಗೂ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ. ಆನ್‍ಲೈನ್ ಮೂಲಕ ಹಣ ಕಟ್ಟಿಸಿಕೊಳ್ಳುತ್ತಿದ್ದ. ಆರೋಪಿ ಹಣ ಪಡೆಯಲು ಬರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಆರೋಪಿಯಿಂದ ₹4.5 ಲಕ್ಷ ನಗದು ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ' ಎಂದೂ ಸಂದೀಪ್ ಪಾಟೀಲ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT