ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜಾಟ: ಅತಿಥಿ ಗೃಹ ಮೇಲೆ ಸಿಸಿಬಿ ದಾಳಿ

Last Updated 3 ಮೇ 2022, 16:30 IST
ಅಕ್ಷರ ಗಾತ್ರ

ಬೆಂಗಳೂರು: ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅತಿಥಿ ಗೃಹವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಜೂಜಾಡುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ನಿವಾಸಿಗಳಾದ ಆರು ಆರೋಪಿಗಳು, ನಗರಕ್ಕೆ ಬಂದು ವ್ಯವಸ್ಥಿತವಾಗಿ ಜೂಜು ಆಡುತ್ತಿದ್ದರು. ಅವರನ್ನು ಬಂಧಿಸಿ, ₹ 50,500 ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಎಲ್ಲರ ವಿರುದ್ಧ ಜೀವನ್‌ಬಿಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಳೇ ವಿಮಾನ ನಿಲ್ದಾಣ ರಸ್ತೆಯ ಎನ್‌.ಆರ್. ಛೇಂಬರ್ ಕಟ್ಟಡದ 5ನೇ ಮಹಡಿಯಲ್ಲಿ ಅತಿಥಿ ಗೃಹವಿದೆ. ಇಲ್ಲಿ ಆರೋಪಿಗಳು ಜೂಜು ಆಡುತ್ತಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT