ಶುಕ್ರವಾರ, ಫೆಬ್ರವರಿ 28, 2020
19 °C
ಹೊರರಾಜ್ಯದ ಯುವತಿಯರ ರಕ್ಷಣೆ

ವೇಶ್ಯಾವಾಟಿಕೆ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯೋಗ ಕೊಡಿಸುವ ನೆಪದಲ್ಲಿ ಹೊರ ರಾಜ್ಯಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು ವೇಶ್ಯಾವಟಿಕೆಗೆ ದೂಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುಬೇಂದ್ರ ದೇಬನಾಥ್ ಮತ್ತು ಪ್ರಜ್ವಲ್ ಬಂಧಿತರು. ಹೊರರಾಜ್ಯಗಳ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ಆರೋಪಿಗಳು ಶ್ರೀರಾಮಪುರದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಅಲ್ಲಿ ಹೊರರಾಜ್ಯಗಳಿಂದ ಹೆಣ್ಣು ಮಕ್ಕಳನ್ನು ಮಾನವ ಕಳ್ಳಸಾಗಣೆ ಮಾಡಿಕೊಂಡು ಬಂದು ಗಿರಾಕಿಗಳಿಂದ ₹2,000ದಿಂದ 3,000 ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಸಿಬಿಐ ಪೊಲೀಸರು ತಿಳಿಸಿದರು.

ವೇಶ್ಯಾವಟಿಕೆಗೆ ತಮ್ಮದೇ ಜಾಲ ರಚಿಸಿಕೊಂಡಿದ್ದ ಆರೋಪಿಗಳು, ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ಯುವತಿಯರನ್ನು ನಗರಕ್ಕೆ ಕರೆದುಕೊಂಡು ಬರುತ್ತಿದ್ದರು. ನಂತರ, ತಾವೇ ಆಶ್ರಯ ನೀಡಿ, ಹೆಚ್ಚಿನ ಹಣದ ಆಸೆ ತೋರಿಸಿ ವೇಶ್ಯಾವಟಿಕೆ ನಡೆಸುವಂತೆ ಪ್ರಚೋದಿಸುತ್ತಿದ್ದರು ಎಂದೂ ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು