ಬೆಂಗಳೂರು: ನಗರದಲ್ಲಿ ವ್ಯವಸ್ಥಿತ ಜಾಲ ರೂಪಿಸಿ ಕೊಂಡು ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಕೇರಳದ ನಿವಾಸಿ ಯಾದ ಆರೋಪಿ, ನೈಜೀರಿಯಾದ ಇಬ್ಬರು ಪ್ರಜೆಗಳ ಜೊತೆ ಸೇರಿ ಡ್ರಗ್ಸ್ ದಂಧೆ ನಡೆಸು ತ್ತಿದ್ದ. ಇದೀಗ ಮೂವರನ್ನು ಬಂಧಿಸ ಲಾಗಿದೆ. ಅವರಿಂದ ₹ 30 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಕೊಡಿಗೇಹಳ್ಳಿ ಬಳಿ ಸೋಮವಾರ ಕಾಣಿಸಿಕೊಂಡಿದ್ದ ಆರೋಪಿಗಳು, ಡ್ರಗ್ಸ್ ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ನಡೆಸಿ ಅವರನ್ನು ಸೆರೆಹಿಡಿಯಲಾಯಿತು’ ಎಂದು ತಿಳಿಸಿದರು.
‘210 ಗ್ರಾಂ ತೂಕದ 500 ಎಕ್ಸೈಟೆಸ್ಸಿ ಮಾತ್ರೆಗಳು ಹಾಗೂ ಆರು ಮೊಬೈಲ್‌ಗಳನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿದೆ. ಈ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.