ಸೋಮವಾರ, ಆಗಸ್ಟ್ 3, 2020
27 °C

ಜಿಂಕೆ ಕೊಂಬು ಮಾರಾಟ; ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿ ಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಕೊಣಂದೂರಿನ ಸುಂದರೇಶ್ (30), ಅರಳಾಪುರ ಗ್ರಾಮದ ರಾಘವೇಂದ್ರ (23) ಹಾಗೂ ಬೆಂಗಳೂರು ಮುತ್ತ್ಯಾಲನಗರದ ಮಂಜು (46) ಬಂಧಿತರು. ಅವರಿಂದ ₹5 ಲಕ್ಷ ಮೌಲ್ಯದ್ದು ಎನ್ನಲಾದ ಎರಡು ಜಿಂಕೆಯ ಕೊಂಬುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

‘ಜಿಂಕೆ ಕೊಂಬುಗಳ ಸಮೇತ ನಗರಕ್ಕೆ ಬಂದಿದ್ದ ಆರೋಪಿಗಳು, ಆರ್‌.ಎಂ.ಸಿ ಯಾರ್ಡ್ ಠಾಣೆ ವ್ಯಾಪ್ತಿಯ ಪ್ರದೇಶವೊಂದರಲ್ಲಿ ನಿಂತಿದ್ದರು. ಗ್ರಾಹಕರಿಗಾಗಿ ಕಾಯುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಯಿತು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘3 ಮೊಬೈಲ್ ಹಾಗೂ ಇನ್ನೋವಾ ಕಾರನ್ನೂ ಜಪ್ತಿ ಮಾಡಲಾಗಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು