ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಹೆಸರು ಬಳಸಿಕೊಂಡು ಕಳಪೆ ಗುಣಮಟ್ಟದ ಗೃಹ ಬಳಕೆ ವಸ್ತುಗಳನ್ನು ತಯಾರಿಸುತ್ತಿದ್ದ ಮೂರು ಗೋದಾಮುಗಳ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ನಡೆಸಿ, ₹1.75 ಕೋಟಿ ಮೌಲ್ಯದ ಉತ್ಪನ್ನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಕಂಪನಿಯೊಂದರ ಪ್ರತಿನಿಧಿಗೆ ಬಂದ ಮಾಹಿತಿ ಆಧರಿಸಿ, ಕಾಟನ್ಪೇಟೆ, ಮಾಚೋಹಳ್ಳಿ, ಕಾಚೋಹಳ್ಳಿ ಗ್ರಾಮದಲ್ಲಿರುವ ಗೋದಾಮುಗಳ ಮೇಲೆ ದಾಳಿ ನಡೆಸಲಾಯಿತು. ಗೋದಾಮುಗಳಲ್ಲಿ ಕಳಪೆ ಗುಣಮಟ್ಟದ ಗೃಹ ಬಳಕೆ ವಸ್ತುಗಳನ್ನು ತಯಾರಿಕೆ ಹಾಗೂ ದಾಸ್ತಾನು ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದ ಆರೋಪಿ ದಲಪತ್ ಸಿಂಗ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಗೋದ್ರೇಜ್ ಕನ್ಸ್ಯೂಮರ್ ಪ್ರಾಡಕ್ಟ್, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್ ಸಂಸ್ಥೆ, ಗ್ರೂಪ್ ಕರಮ್ಚಂದ್ ಲಿಮಿಟೆಡ್ ಸೇರಿದಂತೆ ವಿವಿಧ ಕಂಪನಿಗಳ ಲೈಜೋಲ್, ಹಾರ್ಪಿಕ್, ಟೈಡ್ ಪೌಡರ್, ಆಲ್ಔಟ್, ಏರಿಯಲ್, ಗುಡ್ನೈಟ್ ಸೇರಿದಂತೆ ವಿವಿಧ ಬ್ರ್ಯಾಂಡ್ಗಳ ಗೃಹ ಬಳಕೆ ಉತ್ಪನ್ನಗಳನ್ನು ನಕಲಿಯಾಗಿ ತಯಾರಿಸಿ ಗೋದಾಮಿನಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿತ್ತು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

‘ಕಳಪೆ ಗುಣಮಟ್ಟದ ವಸ್ತುಗಳನ್ನು ತಯಾರಿಸಲು ಬೇಕಾದ ಕಚ್ಚಾ ವಸ್ತುಗಳನ್ನು ಗುಜರಾತ್ನಿಂದ ಆರೋಪಿ ತರಿಸಿಕೊಳ್ಳುತ್ತಿದ್ದ. ಬೆಂಗಳೂರಿನಲ್ಲಿ ತಯಾರಿಸಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಹುಬ್ಬಳ್ಳಿಗೆ ಪ್ರತಿಷ್ಠಿತ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಪೂರೈಸುತ್ತಿದ್ದ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.