ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೆವೆನ್ ಸ್ಟಾರ್’ ಕ್ಲಬ್‌ ಮೇಲೆ ಸಿಸಿಬಿ ದಾಳಿ

Last Updated 28 ಜೂನ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬಾಣಸವಾಡಿ ಸಮೀಪದ ಚೇರ್ಮನ್ ಬಡಾವಣೆಯಲ್ಲಿರುವ ‘ಸೆವೆನ್ ಸ್ಟಾರ್ ಅಸೋಸಿಯೇಷನ್ ರಿಕ್ರಿಯೇಷನ್’ ಕ್ಲಬ್‍ ಮೇಲೆ ಗುರುವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು, 17 ಮಂದಿಯನ್ನು ಬಂಧಿಸಿದ್ದಾರೆ.

‘ಸದಸ್ಯರಲ್ಲದ ಕೆಲವರು ಕ್ಲಬ್‌ಗೆ ಅಕ್ರಮವಾಗಿ ಬಂದು ಹಣವನ್ನು ಕಟ್ಟಿ ಜೂಜು ಆಡುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಲಾಯಿತು. ದಾಳಿ ವೇಳೆ ₹ 54 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಕ್ಲಬ್‌ನಲ್ಲಿ ಜೂಜು ಆಡುತ್ತಿದ್ದ ಹರಿಪ್ರಸಾದ್‌ ಸೇರಿದಂತೆ 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಕ್ಲಬ್‌ನೊಳಗೆ ಪ್ರವೇಶ ನೀಡಿರುವವರ ವಿರುದ್ಧವೂ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT