ಗುರುವಾರ , ಮೇ 19, 2022
20 °C

ಗೂಂಡಾ ಕಾಯ್ದೆಯಡಿ ರೌಡಿ ಸೈಯದ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೌಡಿಶೀಟರ್‌ ಸೈಯದ್‌ ಮಾಜ್‌ ಯಾನೆ ಬಾಂಡ್‌ (20) ಎಂಬಾತನನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

‘ಆರೋಪಿಯು ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ವಿನೋಬಾನಗರದ ಮಜೀದ್‌ ಖೈರ್‌ ಬಳಿ ವಾಸವಿದ್ದ. 2019ರಿಂದ 2022ರ ಫೆಬ್ರುವರಿ ಅವಧಿಯಲ್ಲಿ ಈತನ ವಿರುದ್ಧ ಒಟ್ಟು ಆರು ಪೊಲೀಸ್‌ ಠಾಣೆಗಳಲ್ಲಿ 11 ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಿಂದ ಜಾಮೀನು ಪಡೆದ ನಂತರವೂ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯು ಗಾಂಜಾ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಸಹಚರರ ಜೊತೆಗೂಡಿ ಮಾರಕಾಸ್ತ್ರಗಳಿಂದ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿದ್ದ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು