ಮಂಗಳವಾರ, ನವೆಂಬರ್ 24, 2020
21 °C

ಜಾಕೀರ್‌ ಪತ್ತೆಗೆ ಸಿಸಿಬಿ ಹುಡುಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಡಿ ಕಾಂಗ್ರೆಸ್‌ ಮುಖಂಡರೂ ಆಗಿರುವ ಮಾಜಿ ಮೇಯರ್ ಆರ್‌. ಸಂಪತ್‌ರಾಜ್‌ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯಾದ ಮಾಜಿ ಕಾರ್ಪೋರೇಟರ್ ಜಾಕೀರ್‌ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

‘ರಾಜಕೀಯ ವೈಷಮ್ಯದಿಂದಾಗಿ ಸಂಪತ್‌ರಾಜ್, ಜಾಕೀರ್ ಹಾಗೂ ಇತರರು ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದರು. ಈ ಸಂಗತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಕೆಲ ದಿನ ಸಂಪತ್‌ರಾಜ್ ಹಾಗೂ ಜಾಕೀರ್ ಒಂದೇ ಸ್ಥಳದಲ್ಲಿ ಉಳಿದುಕೊಂಡಿದ್ದರು. ಈ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ಅಮಾಯಕರೆಂದು ವಾದ: ‘ಪ್ರಕರಣ ಸಂಬಂಧ ಸಂಪತ್‌ರಾಜ್ ವಿಚಾರಣೆಯಲ್ಲಿ ಯಾವುದೇ ಮಾಹಿತಿ ನೀಡುತ್ತಿಲ್ಲ. ತಾವು ಅಮಾಯಕರು. ತಮ್ಮ ರಾಜಕೀಯ ಭವಿಷ್ಯ ಮುಗಿಸಲು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬುದಾಗಿ ಸಂಪತ್‌ರಾಜ್ ವಾದಿಸುತ್ತಿದ್ದಾರೆ. ಪುರಾವೆಗಳ ಸಮೇತ ಪ್ರಶ್ನಿಸಿದಾಗ, ಉತ್ತರಿಸದೇ ಮೌನವಾಗುತ್ತಿದ್ದಾರೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.