ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ₹ 45 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Last Updated 4 ಜೂನ್ 2022, 2:17 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ವ್ಯವಸ್ಥಿತ ಜಾಲ ರೂಪಿಸಿಕೊಂಡು ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆ ಕ್ಲಿಂಟನ್ ಕೋಸಿ ಇಫೆಜಿಕಾ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ₹ 45 ಲಕ್ಷ ಮೌಲ್ಯದ 221 ಗ್ರಾಂ ಎಂಡಿಎಂಎ ಮಾತ್ರೆಗಳು, ಕಾರು ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವ್ಯಾಪಾರ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿ ಕ್ಲಿಂಟನ್, ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ದೆಹಲಿಯಲ್ಲಿರುವ ಪೆಡ್ಲರ್ ಜೊತೆ ಒಡನಾಟ ಹೊಂದಿ, ಆತನಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT