ಶುಕ್ರವಾರ, ಜುಲೈ 1, 2022
27 °C

₹ 20 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ ಸಿಸಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾದಕ ವಸ್ತು (ಡ್ರಗ್ಸ್) ಸಾಗಣೆ ಹಾಗೂ ಮಾರಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಬಾಣಸವಾಡಿಯಲ್ಲಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಬುಧವಾರ ಬಂಧಿಸಿದ್ದಾರೆ.

‘ಮೀಕಾಲೆ ಜಾನ್ಸನ್ ಹಾಗೂ ಚಿನೆಡೂ ಆನವೋರಾ ಲಾವರೆನ್ಸಿ ಬಂಧಿತರು. ಅವರಿಂದ ₹ 20 ಲಕ್ಷ ಮೌಲ್ಯದ 250 ಗ್ರಾಂ ಎಂಡಿಎಂಎ ಡ್ರಗ್ಸ್, ಎರಡು ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ವ್ಯಾಪಾರ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿಗಳು, ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ಮುಂಬೈನಲ್ಲಿರುವ ಪರಿಚಯಸ್ಥರ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ಆರೋಪಿಗಳು, ಮನೆಯಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ವ್ಯಾಪಾರದ ಸೋಗಿನಲ್ಲಿ ನಗರದೆಲ್ಲೆಡೆ ಸುತ್ತಾಡಿ ಡ್ರಗ್ಸ್ ಮಾರುತ್ತಿದ್ದರು.’

‘ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಕಂಪನಿಗಳ ಉದ್ಯೋಗಿಗಳು ಹಾಗೂ ಇತರರು ಆರೋಪಿಗಳ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು. ಡ್ರಗ್ಸ್ ಮಾರಾಟದಿಂದ ಬಂದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರು. ಆರೋಪಿಗಳ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಸಮೇತ ಬಂಧಿಸಲಾಗಿದೆ’ ಎಂದೂ ಸಿಸಿಬಿ ಪೊಲೀಸರು ತಿಳಿಸಿದರು.

‘ಇಂದಿರಾನಗರ ಹಾಗೂ ಕಾಡುಗೋಡಿ ಠಾಣೆಗಳಲ್ಲೂ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಹಿತಿ ಇದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು