ಬೆಂಗಳೂರು: ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, ₹64.45 ಲಕ್ಷ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆತನಿಂದ ₹1.20 ಲಕ್ಷ ಮೌಲ್ಯದ 3 ಕೆ.ಜಿ. ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಆರೋಪಿಯು ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ನಗರಕ್ಕೆ ತರುತ್ತಿದ್ದ. ನಗರದಲ್ಲಿ ಗ್ರಾಹಕರಿಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದ ಎಂದು ಮಾಹಿತಿ ನೀಡಿದರು.

ಎಂಡಿಎಂಎ ಕ್ರಿಸ್ಟೆಲ್ ವಶ: ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರದ ಕಾವೇರಿ ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಡ್ರಗ್ಸ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 522 ಗ್ರಾಂ ಎಂಡಿಎಂಎ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಿಬ್ಬಲೂರು ಗ್ರಾಮದ ಇಂದಿರಾ ಕ್ಯಾಂಟೀನ್ ಬಳಿಯ ಖಾಲಿ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬಂಧಿತನಿಂದ 3 ಕೆ.ಜಿ. ಗಾಂಜಾ ಹಾಗೂ ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ. ಬಿಹಾರದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ತಂದು ನಗರದ ಪರಿಚಯಸ್ಥ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ₹2.50 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಕೋರಮಂಗಲ ಹಾಗೂ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇ–ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ₹5.50 ಲಕ್ಷ ಮೌಲ್ಯದ ಇ–ಸಿಗರೇಟು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಇ–ಸಿಗರೇಟು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ನಾಲ್ವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.