‘100ಕ್ಕಿಂತ ಹೆಚ್ಚು ಜನ ಸೇರಿದರೆ ಸಿ.ಸಿ.ಟಿ.ವಿ ಕ್ಯಾಮೆರಾ ಕಡ್ಡಾಯ’
ಬೆಂಗಳೂರು: ’100 ಅಥವಾ ಅದಕ್ಕಿಂತ ಹೆಚ್ಚು ಸಾರ್ವಜನಿಕರು ಸೇರುವ ಜಾಗಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯ. ಅದನ್ನು ಉಲ್ಲಂಘಿಸಿದರೆ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ಸಾರ್ವಜನಿಕರ ಸುರಕ್ಷತಾ ಕಾಯ್ದೆ 2017ರಡಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಆಯಾ ಠಾಣೆ ಇನ್‌ಸ್ಪೆಕ್ಟರ್‌ಗಳು, ಪ್ರತಿಯೊಂದು ಪ್ರದೇಶದಲ್ಲೂ ಪರಿಶೀಲನೆ ನಡೆಸಬೇಕು’ ಎಂದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.