ಬುಧವಾರ, ಏಪ್ರಿಲ್ 1, 2020
19 °C

ಓಲಾ, ಉಬರ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಭಾಸ್ಕರ್ ರಾವ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಓಲಾ, ಉಬರ್ ಸೇರಿದಂತೆ ಬಾಡಿಗೆ ಟ್ಯಾಕ್ಸಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು’ ಎಂದು ನಗರ ಪೊಲೀಸ್ ಕಮಿಷನರ್‌ ಭಾಸ್ಕರ್ ರಾವ್ ಸೂಚನೆ ನೀಡಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಹೈದರಾಬಾದ್‍ನಲ್ಲಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಓಲಾ, ಉಬರ್‌, ಖಾಸಗಿ ಟ್ಯಾಕ್ಸಿಗಳಿಗೆ ವಿದೇಶಗಳಲ್ಲಿ ಇರುವಂತೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಲಾಗುವುದು’ ಎಂದರು.

‘ಮಹಿಳೆಯರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಯಾಬ್‍ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ, ಜಿಪಿಎಸ್, ತುರ್ತು ಬಟನ್ ಅಳವಡಿಸುವುದು ಕಡ್ಡಾಯ. ವಿದೇಶಗಳಲ್ಲಿ ಈಗಾಗಲೇ ವ್ಯವಸ್ಥೆ ಇದೆ’ ಎಂದು ಅವರು ಹೇಳಿದರು.

‘ಹೈದರಾಬಾದಿನಲ್ಲಿ ನಡೆದ ಘಟನೆಯ ಬಳಿಕ ಬೆಂಗಳೂರು ನಗರ ಪೊಲೀಸರು ನಿರ್ಮಿಸಿದ್ದ ಸುರಕ್ಷಾ ಆ್ಯಪ್‍ಗೆ ಹೆಚ್ಚಿನ ಬೇಡಿಕೆ ಬಂದಿದೆ’ ಎಂದೂ ಕಮಿಷನರ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು