ಭಾನುವಾರ, ಮೇ 22, 2022
27 °C

ಸಿಡಿ ಬ್ಲ್ಯಾಕ್‌ಮೇಲ್: ವಿಚಾರಣೆಗೆ ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದ ಪ್ರಕರಣದ ಆರೋಪಿ ಶ್ರವಣ್, ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಎದುರು ವಿಚಾರಣೆಗಾಗಿ ಮಂಗಳವಾರ ಹಾಜರಾದರು.

ಇನ್ನೊಬ್ಬ ಆರೋಪಿ ನರೇಶ್‌ ಗೌಡನನ್ನು ಸೋಮವಾರವಷ್ಟೇ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅದರ ಬೆನ್ನಲ್ಲೇ ಶ್ರವಣ್‌ನನ್ನು ಮಂಗಳವಾರ ಮಧ್ಯಾಹ್ನದಿಂದ ಸಂಜೆಯವರೆಗೂ ವಿಚಾರಣೆ ನಡೆಸಿ ವಾಪಸು ಕಳುಹಿಸಿದರು.

‘ಪ್ರಕರಣ ಸಂಬಂಧ ಇಬ್ಬರ ಹೇಳಿಕೆ ಪಡೆದು ಪರಿಶೀಲಿಸಲಾಗುತ್ತಿದೆ. ಅಗತ್ಯವಿದ್ದರೆ ಪುನಃ ಅವರನ್ನು ವಿಚಾರಣೆಗೆ ಕರೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಬ್ಲ್ಯಾಕ್‌ಮೇಲ್ ಸಂಬಂಧ ರಮೇಶ ಜಾರಕಿಹೊಳಿ ಅವರು ಸದಾಶಿನಗರ ಠಾಣೆಗೆ ದೂರು ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು