ಮಂಗಳವಾರ, ಫೆಬ್ರವರಿ 25, 2020
19 °C

ಕೇಂದ್ರ ವಿ.ವಿ: ಅಧಿಸೂಚನೆ ಹಿಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ರೀತಿಯ ಕಾಲೇಜು ಸಂಯೋಜನೆಯ ಕುರಿತಂತೆ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಸರ್ಕಾರದ ಸೂಚನೆಯಂತೆ ಹಿಂದಕ್ಕೆ ಪಡೆಯಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ಕಾಲೇಜು ಸಂಯೋಜನೆಯಲ್ಲಿ ಸ್ಥಳೀಯ ವಿಚಾರಣಾ ಸಮಿತಿಗಳನ್ನು ಸದೃಢಗೊಳಿಸುವ ಉದ್ದೇಶದಿಂದ ಎಲ್ಲ ವಿಶ್ವವಿದ್ಯಾಲಯಗಳಿಗೆ ಅನ್ವಯವಾಗುವಂತೆ ಏಕರೂಪದ ನಮೂನೆ ಸಿದ್ಧಪಡಿಸಲಿದೆ. ಹೀಗಾಗಿ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಸಂಯೋಜನಾ ಪ್ರಕ್ರಿಯೆಗಳನ್ನು ಮುಂದುವರಿಸಬಾರದು ಎಂದು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಪತ್ರ ಬರೆದು ಸೂಚಿಸಿರುವ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)