ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿ ಪ್ರಾಧ್ಯಾಪಕರ ನೇಮಕಕ್ಕೂ ಸಿಇಟಿ

Last Updated 14 ನವೆಂಬರ್ 2022, 20:44 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.

ಇದೇ ಪ್ರಥಮ ಬಾರಿ ಇಲಾಖೆ ಇಂತಹ ಕ್ರಮಕೈಗೊಳ್ಳಲು ಮುಂದಾಗಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿದ್ದ ಕುಲಪತಿಗಳ ಸಮಿತಿಯು ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಸ್ನಾತಕೋತ್ತರ ಪದವಿ ಜತೆಗೆ ಪಿಎಚ್‌ಡಿ/ಎಂ.ಫಿಲ್‌ ಮತ್ತು ಎನ್‌ಇಟಿ/ಎಸ್‌ಇಟಿ ಹೊಂದಿದವರು ಸಿಇಟಿಗೆ ಅರ್ಜಿ ಸಲ್ಲಿಸಲು ಅರ್ಹರು.

ಪ್ರತಿಯೊಂದು ವಿಷಯಕ್ಕೆ 50 ಅಂಕಗಳ ಸಿಇಟಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವುದು ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ವಿವರಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಥವಾ ಯಾವುದಾದರೂ ಸಕ್ಷಮ ಪ್ರಾಧಿಕಾರ ಈ ಪರೀಕ್ಷೆಯನ್ನು ನಡೆಸಬಹುದಾಗಿದೆ.

ವಿವಿಧ ವಿಶ್ವವಿದ್ಯಾಲಯಗಳು ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ ಅಂಕಗಳನ್ನು ನೀಡುವಲ್ಲಿ ಹಲವಾರು ವ್ಯತ್ಯಾಸಗಳಿವೆ. ಕೆಲವು ಸಂಸ್ಥೆಗಳಲ್ಲಿ ಕಠಿಣ ಪದ್ಧತಿ ಅನುಸರಿಸಿದರೆ, ಕೆಲವೆಡೆ ಉದಾರವಾಗಿ ಅಂಕಗಳನ್ನು ನೀಡಲಾಗುತ್ತಿದೆ. ಇಂತಹ ತಾರತಮ್ಯಗಳನ್ನು ನಿವಾರಿಸಲು ಸಿಇಟಿ ಅಗತ್ಯವಾಗಿದೆ ಎಂದು ಪ್ರತಿಪಾದಿಸಲಾಗಿದೆ. ‘ಒಂದು ಬಾರಿ ಈ ಪದ್ಧತಿ ಅನುಷ್ಠಾನಗೊಂಡರೆ ಸಿಇಟಿಯಲ್ಲಿ ಅರ್ಹರಾದವರು ಮಾತ್ರ ವಿಶ್ವವಿದ್ಯಾಲಯದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ’ ಎಂದುಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT