ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಮುಂಗಡ ಪಾವತಿಸಲು ಮತ್ತು ಆಯ್ಕೆಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆವರೆಗೆ ಕಾಲಾವಕಾಶ ನೀಡಲಾಗಿದೆ.

ಮೊದಲ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೂಡ ಆಗಸ್ಟ್ 26ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಎರಡನೇ ಸುತ್ತಿನ ಅಣಕು/ ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 29ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್, ಯೋಗ- ನ್ಯಾಚುರೋಪಥಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಇತ್ಯಾದಿ ಯುಜಿಸಿಇಟಿ ಕೋರ್ಸ್ಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದ ನಂತರ ಅಭ್ಯರ್ಥಿಗಳು ಛಾಯ್ಸ್- 1 ಅಥವಾ ಛಾಯ್ಸ್-4 ಆಯ್ಕೆ ಮಾಡಿಕೊಳ್ಳಬಹುದು. ಛಾಯ್ಸ್ - 2 ಮತ್ತು 3 ಲಭ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.