ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಎರಡನೇ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟ

Last Updated 25 ನವೆಂಬರ್ 2022, 17:47 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ, ಮುಂದುವರಿದ ಸೀಟುಗಳ ಎರಡನೇ ಹಂಚಿಕೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ನ. 26ರಂದು ಸೀಟು ಹಂಚಿಕೆ ಮತ್ತು ಶುಲ್ಕದ ವಿವರ ಪ್ರಕಟಿಸಲಾಗುವುದು. 28ರ ಒಳಗೆ ಅಭ್ಯರ್ಥಿಗಳು ಸೀಟು ಆಯ್ಕೆ ಮಾಡಿಕೊಳ್ಳಬಹುದು. 29ರಂದು ಸೀಟು ಹಂಚಿಕೆಯ ವಿವರ ಪ್ರಕಟಿಸ ಲಾಗುವುದು. 30ರ ಒಳಗೆ ಶುಲ್ಕ ಪಾವತಿಸಿ, ಆಯ್ಕೆ ಮಾಡಿಕೊಂಡ ಕಾಲೇಜಿಗೆ ಪ್ರವೇಶ ಪಡೆಯಬೇಕು.

ರ‍್ಯಾಂಕಿಂಗ್‌ ಪಡೆದು ಇದುವರೆಗೂ ದಾಖಲೆಗಳ ಪರಿಶೀಲನೆಗೆ ಹಾಜರಾಗದಿರುವ ಅಭ್ಯರ್ಥಿಗಳು ಎರಡನೇ ಸುತ್ತಿನ ಸೀಟು ಹಂಚಿಕೆಗೆ ಅರ್ಹತೆ ಪಡೆಯಲು ನ.26ರ ಬೆಳಿಗ್ಗೆ 11ಕ್ಕೆ ಮಲ್ಲೇಶ್ವರದ ಕೆಇಎ ಕಚೇರಿಗೆ ಮೂಲ ದಾಖಲೆಗಳು ಹಾಗೂ ನಕಲು ಪ್ರತಿಗಳೊಂದಿಗೆ ಹಾಜರಾಗಬಹುದು.

ದ್ವಿತೀಯ ಪಿಯು ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿ ಗಳಿಗೆಸರ್ಕಾರದ ನಿರ್ದೇಶನದಂತೆ ರ್‍ಯಾಂಕಿಂಗ್‌ ನೀಡಲಾಗುವುದು. ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಯುವ ಸೀಟುಗಳನ್ನು ಅವರಿಗೆ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT