ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ಸರ ಕಳವು: ಆರೋಪಿ ಬಂಧನ

Published : 18 ಏಪ್ರಿಲ್ 2024, 16:45 IST
Last Updated : 18 ಏಪ್ರಿಲ್ 2024, 16:45 IST
ಫಾಲೋ ಮಾಡಿ
Comments

ಬೆಂಗಳೂರು: ನೀರು ಶುದ್ದೀಕರಣ ಘಟಕದಲ್ಲಿ ಕ್ಯಾನ್‌ಗೆ ನೀರು ತುಂಬಿಸುತ್ತಿದ್ದ ಯುವಕನ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಳಿಕಾನಗರ ನಿವಾಸಿ ಶ್ರೀಧರ (21)ಬಂಧಿತ ಆರೋಪಿ.

ಆರೋಪಿಯಿಂದ ₹80 ಸಾವಿರ ಮೌಲ್ಯದ 13 ಗ್ರಾಂ ಚಿನ್ನದ ಸರ, ಒಂದು ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಮಾರ್ಚ್‌ 19ರಂದು ರಾತ್ರಿ ಮಾರುತಿನಗರದ ನಿವಾಸಿ ಪ್ರತಾಪ್, ಚಕ್ರನಗರ ಮುಖ್ಯರಸ್ತೆಯ ವಾಲ್ಮೀಕಿ ನಗರದಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ನೀರು ತುಂಬಿಸುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಸರ ಕಸಿದು ಪರಾರಿಯಾಗಿದ್ದರು.

ಈ ಸಂಬಂಧ ದಾಖಲಾದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸವಾಗಿದೆ. ಆರೋಪಿಯ ಬಂಧನದಿಂದ ತಾವರೆಕೆರೆ ಠಾಣೆಯಲ್ಲಿ ದಾಖಲಾಗಿದ್ದ ವಾಹನ ಕಳವು ಪ್ರಕರಣಪತ್ತೆಯಾಗಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT