ಬುಧವಾರ, ಜುಲೈ 28, 2021
26 °C

ಆರೋಗ್ಯ ಸಿಬ್ಬಂದಿ ಸೋಗಿನಲ್ಲಿ ಸರಗಳವು; ಸಿಕ್ಕಿಬಿದ್ದ ಆರೋಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಸೋಗಿನಲ್ಲಿ ಮನೆಗೆ ಹೋಗಿ ಸರಗಳವು ಮಾಡುತ್ತಿದ್ದ ಎನ್ನಲಾದ ಆರೋಪಿ ಬಸವೇಶ್ವರನಗರದ ಮೂರ್ತಿ (38) ಎಂಬಾತನನ್ನು ಸಾರ್ವಜನಿಕರೇ ಹಿಡಿದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಒಪ್ಪಿಸಿದ್ದಾರೆ.

‘ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ಜೂನ್ 16ರಂದು ಹೋಗಿದ್ದ ಆರೋಪಿ, ಆರೋಗ್ಯ ಸಮೀಕ್ಷೆ ನೆಪದಲ್ಲಿ ಮಹಿಳೆಯನ್ನು ಮಾತನಾಡಿಸಿದ್ದ. ನಂತರ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರೇ ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಒಪ್ಪಿಸಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.