ಬೆಂಗಳೂರು: ಕೆರೆ ಬಳಿ ವಾಯು ವಿಹಾರ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೊಲ್ಲಹಳ್ಳಿಯ ನಿವಾಸಿ ನಿತಿನ್ (27) ಎಂಬಾತನನ್ನು ಬಂಧಿಸಿ, ₹9 ಲಕ್ಷ ಮೌಲ್ಯದ 86 ಗ್ರಾಂ ತೂಕದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 12ರಂದು ಮಾರುಗೊಂಡನಹಳ್ಳಿಯ ಕೆರೆ ಬಳಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯೊಬ್ಬರ ಸರ ಕಳವು ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ಖಚಿತ ಮಾಹಿತಿ ಮೇಲೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಹಾಸನ ಆಭರಣ ಅಂಗಡಿಯಲ್ಲಿ ಅಡವಿಟ್ಟಿದ್ದ ಕಳವು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.