ಕದ್ದ ಬೈಕ್‌ನಲ್ಲಿ ಸುತ್ತಾಡಿ ಸರ ಕಳವು: ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ಹಲವೆಡೆ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಚಾಮರಾಜಪೇಟೆಯ ಸೈಯದ್ ಖಾಸೀಫ್ (22), ಫರೀದ್ ಅಹ್ಮದ್ (20) ಹಾಗೂ ಪಾದರಾಯನಪುರದ ಸುಲ್ತಾನ್ ಪಾಷಾ (27) ಬಂಧಿತರು. ಇವರಿಂದ 48.50 ಗ್ರಾಂ ಚಿನ್ನದ ಸರ, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬಿಟಿಎಂ ಬಡಾವಣೆಯಲ್ಲಿ ಬೈಕ್ ಕದ್ದಿದ್ದ ಆರೋಪಿಗಳು, ಅದರಲ್ಲಿಯೇ ನಗರದ ಹಲವೆಡೆ ಸುತ್ತಾಡುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೊಬೈಲ್ ಹಾಗೂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು’ ಎಂದು ತಿಳಿಸಿದರು.
‘ವೃದ್ಧೆಯೊಬ್ಬರ ಚಿನ್ನದ ಸರವನ್ನು ಆರೋಪಿಗಳು ಇತ್ತೀಚೆಗೆ ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಕೃತ್ಯ ನಡೆದ ಸ್ಥಳದಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಲಾಗಿತ್ತು. ಕೆಲ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಸುಲ್ತಾನ್ ಪಾಷಾ, ಕದ್ದ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.