ಬೆಂಗಳೂರು: ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ನಿಯಮ ಬಾಹಿರವಾಗಿ ಸರ್ಕಾರಿ ನಿವೇಶನ ಕಬಳಿಸ
ಲಾಗುತ್ತಿದೆ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯ
ಸರ್ಕಾರ ಬಡವರಿಗೆ ಮನೆ ನೀಡಿಲ್ಲ. ಭೂ ರಹಿತರಿಗೆ ಭೂಮಿ ನೀಡಿಲ್ಲ. ಆದರೆ, ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ. ಮುಧೋಳ, ಬಾದಾಮಿ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ನಿವೇಶನ ಗಳನ್ನು ನಿಯಮ ಉಲ್ಲಂಘಿಸಿ ಅತ್ಯಂತ ಕಡಿಮೆ ಬೆಲೆಗೆ ಪಡೆದುಕೊಂಡಿ ದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ನಿವೇಶನಕ್ಕೆ ದರವನ್ನೇ ನಮೂದಿಸಿಲ್ಲ ಎಂದು ದೂರಿದರು.

ಸಚಿವ ಸಂಪುಟದ ಅನುಮೋದನೆ ಪಡೆದು ನಾಗರಿಕ ಸೌಲಭ್ಯದ ನಿವೇಶನ ಗಳನ್ನು ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕೊಟ್ಟ ಮಾಹಿತಿಯನ್ನು ಛಲವಾದಿ ಬಿಡುಗಡೆ ಮಾಡಿದರು.

‘ಎಲ್ಲ ನಿವೇಶನಗಳನ್ನು ಸರ್ಕಾರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಭೂಕಬಳಿಕೆಯಿಂದ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.