ಭಾನುವಾರ, ನವೆಂಬರ್ 27, 2022
26 °C

ಚಾಮರಾಜನಗರ: ಪಿಎಫ್ ಐ ಜಿಲ್ಲಾ ಅಧ್ಯಕ್ಷ, ಕಾರ್ಯದರ್ಶಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ ಐ) ಜಿಲ್ಲಾ ಅಧ್ಯಕ್ಷ ಕಫೀಲ್ ಅಹಮದ್ ಹಾಗೂ ಜಿಲ್ಲಾ ಕಾರ್ಯದರ್ಶಿ ಸುಹೇಬ್ ಖಾನ್ ಅವರನ್ನು ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

'ಮುಂಜಾಗ್ರತಾ ಕ್ರಮವಾಗಿ ಇಬ್ಬರನ್ನೂ ಬಂಧಿಸಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ 'ಪ್ರಜಾವಾಣಿ'ಗೆ ತಿಳಿಸಿದರು. 

ಎರಡು ತಂಡಗಳಾಗಿ ಕಾರ್ಯಾಚರಣೆ‌ ನಡೆಸಿದ ಪೊಲೀಸರು ಬೆಳಿಗ್ಗೆ 4.30ರ ಸುಮಾರಿಗೆ ಇಬ್ಬರನ್ನು ವಶಕ್ಕೆ ಪಡೆದು, ನಂತರ ತಹಶೀಲ್ದಾರರ ಮುಂದೆ ಹಾಜರು ಪಡಿಸಿದರು.

ಇಬ್ಬರನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಶಿವಕುಮಾರ್ ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು