ಬುಧವಾರ, ಮೇ 18, 2022
23 °C

‘ಬುದ್ಧಿ ಕಲಿಸಲು ಹೋಗಿ ಮಗನ ಕಳೆದುಕೊಂಡೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅರ್ಪಿತ್ (25) ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮೃತ ತಂದೆ ಸುರೇಂದ್ರಕುಮಾರ್ ಅಲಿಯಾಸ್ ಬಾಬು (51) ಅವರ ವಿಚಾರಣೆ ನಡೆಸುತ್ತಿದ್ದಾರೆ.

ಏಪ್ರಿಲ್ 1ರಂದು ಅರ್ಪಿತ್ ಮೈ ಮೇಲೆ ಥಿನ್ನರ್ ಎರಚಿ ಬೆಂಕಿ ಹಚ್ಚಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಪ್ರಿಲ್ 7ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅರ್ಪಿತ್ ತೀರಿಕೊಂಡಿದ್ದರು. 

‘ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದ ಬಗ್ಗೆ ಸುರೇಂದ್ರಕುಮಾರ್ ಪಶ್ಚಾತ್ತಾಪ ಪಡುತ್ತಿದ್ದಾರೆ. ಮಗನ ನೆನೆದು ಕಣ್ಣೀರಿಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮಾತು ಕೇಳದ ಮಗ: ‘ಮಗನನ್ನು ಪ್ರೀತಿಸುತ್ತಿದ್ದೆ. ತಪ್ಪು ಮಾಡಿದಾಗ ಬುದ್ಧಿ ಹೇಳುತ್ತಿದ್ದೆ. ಕೊಲೆ ಉದ್ದೇಶ ನನಗೆ ಇರಲಿಲ್ಲ.  ಬುದ್ಧಿ ಕಲಿಸಲು ಹೋಗಿ ಮಗನನ್ನು ಕಳೆದುಕೊಂಡೆ’ ಎಂಬುದಾಗಿ ಸುರೇಂದ್ರಕುಮಾರ್ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು