ಬೆಂಗಳೂರು: ‘ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿರುವ ಗೋಡೆಯನ್ನು ನೆಲಸಮ ಮಾಡುತ್ತೇವೆ’ ಎಂಬುದಾಗಿ ಹೇಳಿಕೆ ನೀಡಿದ್ದ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಎಸ್. ಭಾಸ್ಕರನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

‘ಬಿಬಿಎಂಪಿ ಆಟದ ಮೈದಾನ ಬಳಕೆ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದೆಂದು ಬಿಬಿಎಂಪಿ ಜಂಟಿ ಆಯುಕ್ತರು ಆಗಸ್ಟ್ 6ರಂದು ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಭಾಸ್ಕರನ್, ‘ವಕ್ಫ್ ಬೋರ್ಡ್ನವರೇ ಗೋಡೆ ನೆಲಸಮ ಮಾಡಬೇಕು. ಇಲ್ಲದಿದ್ದರೆ, ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಕೆಡವಿದ ದಿನ. ಅಂದೇ ಈ ಗೋಡೆ ನೆಲಸಮ ಮಾಡುತ್ತೇವೆ’ ಎಂದಿದ್ದರು.

ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿ, ಎರಡು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರಲು ಭಾಸ್ಕರನ್ ಯತ್ನಿಸಿದ್ದಾರೆ. ಹೀಗಾಗಿ, ಇವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.