ಚಂದಾಪುರ(ಆನೇಕಲ್): ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಬೆಂಗಳೂರು-ಚಂದಾಪುರ-ಅತ್ತಿಬೆಲೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿ, 2027ರ ಮಾರ್ಚ್ ಒಳಗಾಗಿ ರಾಷ್ಟ್ರೀಯ ಹೆದ್ದಾರಿಯ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ವಾಹನ ದಟ್ಟಣೆಯಿಂದ ಮುಕ್ತಿ ದೊರೆಯಲಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಹಲವು ಸಮಸ್ಯೆಗಳಿಗೆ ಕಾಮಗಾರಿ ಪರಿಹಾರ ನೀಡಲಿದೆ. ವೀರಸಂದ್ರದಲ್ಲಿ ಮಳೆ ಬಂದಾಗ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತದೆ. ನೀರು ರಸ್ತೆ ಬಾರದಂತೆ ಕ್ರಮ ವಹಿಸಲು ಕಲ್ವರ್ಟ್ ಕಾಮಗಾರಿ ಕೈಗೊಳ್ಳಲಾಗಿದೆ. 45 ದಿನದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಚಂದಾಪುರ ರೈಲ್ವೆ ಸೇತುವೆ ಬಳಿ ರಸ್ತೆ ವಿಸ್ತರಣೆ ಮಾಡಲಾಗುತ್ತಿದೆ. ಕೆಆರ್ಐಡಿಇ ರಸ್ತೆ ವಿಸ್ತರಣೆ ಕಾಮಗಾರಿ ನಡೆಸುತ್ತಿದ್ದು, ನವೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಮೂಲಕ ವಾಹನ ದಟ್ಟಣೆ ಕಡಿಮೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಗುಡ್ಡಹಟ್ಟಿ, ಗೆಸ್ಟ್ಲೈನ್ ಬಳಿ ಕೆಳಸೇತುವೆ ನಿರ್ಮಾಣ ಮಾಡಲಾಗಿದೆ. ರಸ್ತೆ ದಟ್ಟಣೆ ತಪ್ಪಿಸಲು ವಾಹನಗಳಿಗೆ ಅನುಕೂಲವಾಗುವಂತೆ ರಸ್ತೆ ವಿಭಜಕ ನಿರ್ಮಾಣ ಮಾಡಿದ್ದು, ಮೂರು ಪಥಗಳಲ್ಲಿ ವಾಹನಗಳು ಸಾಗಲಿದೆ. ಇದರಿಂದ ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಈ ಕಾಮಗಾರಿಯು 30-40 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಎಸ್ಟಿಆರ್ಆರ್ ಪೂರ್ವ ಕಾಮಗಾರಿಯು ಆಗಸ್ಟ್ ವೇಳೆಗೆ ಮುಗಿಯಲಿದ್ದು, ಇದರಿಂದ ಚಂದಾಪುರ, ಅತ್ತಿಬೆಲೆ, ಹೊಸೂರು ರಸ್ತೆಯಲ್ಲಿ ಶೇ.70ರಷ್ಟು ಲಾರಿಗಳು, ಕ್ಯಾಂಟರ್ಗಳು ಸೇರಿದಂತೆ ಭಾರಿ ವಾಹನಗಳ ಓಡಾಡುವುದಿಲ್ಲ. ಹಾಗಾಗಿ ರಸ್ತೆ ದಟ್ಟಣೆ ಕಡಿಮೆಯಾಗುತ್ತದೆ. ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಕ್ರಮ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು, ಕೆಆರ್ಐಡಿಇ, ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಲಕ್ಷ್ಮೀಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಸೇತುವೆ ಕಲ್ಪಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸ್ಟೀಲ್ ರಸ್ತೆ ವಿಭಜಕಗಳ ಬದಲಿಗೆ ಸಿಮೆಂಟ್ ರಸ್ತೆ ವಿಭಜಕ ಅಳವಡಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಚಂದಾಪುರ ಪುರಸಭಾ ಅಧ್ಯಕ್ಷೆ ಶಾರದ ವರದರಾಜು, ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್, ಮುಖಂಡರಾದ ಲಕ್ಷ್ಮೀಕಾಂತ್, ಮುರಳಿ, ಶಶಿ, ನಾಗೇಶ್ ರೆಡ್ಡಿ, ನಾರಾಯಣರೆಡ್ಡಿ, ಚಂದಾಪುರ ಪುರಸಭೆ ಮುಖ್ಯಾಧಿಕಾರಿ ರಮೇಶ್ ರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-15-132671099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.