ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಲ್ಲರ್ ನಿರ್ಮಾಣ ಕಾಮಗಾರಿ: ಹೈಕೋರ್ಟ್ ನಿರ್ದೇಶನ ನೋಡಿಕೊಂಡು ಮಾರ್ಗಸೂಚಿ ಬದಲಾವಣೆ

Last Updated 13 ಜನವರಿ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಪಿಲ್ಲರ್ ನಿರ್ಮಾಣ ಕಾಮಗಾರಿಗೆ ಮಾರ್ಗಸೂಚಿ ಬದಲಾವಣೆ ಬಗ್ಗೆ ಹೈಕೋರ್ಟ್‌ ನಿರ್ದೇಶನ ನೋಡಿಕೊಂಡು ಮುಂದುವರಿಯಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ವಿಮಾನ ನಿಲ್ದಾಣ ಮಾರ್ಗದಲ್ಲಿ 12 ಮೀಟರ್ ಎತ್ತರದ ಪಿಲ್ಲರ್‌ಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದಕ್ಕಿಂತ ಹೆಚ್ಚಿನ ಎತ್ತರದ ಪಿಲ್ಲರ್‌ಗಳ ನಿರ್ಮಾಣ ವಿಷಯದಲ್ಲಿ ಮಾರ್ಗಸೂಚಿ ಬದಲಿಸಬೇಕು ಎಂಬ ಆಲೋಚನೆಯನ್ನು ಬಿಎಂಆರ್‌ಸಿಎಲ್ ನಡೆಸಿತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವುದರಿಂದ ಪೀಠದ ನಿರ್ದೇಶನಕ್ಕೆ ಕಾಯಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

‘12 ಮೀಟರ್‌ಗೂ ಕಡಿಮೆ ಎತ್ತರದ ಪಿಲ್ಲರ್‌ಗಳ ನಿರ್ಮಾಣ ಕಾಮಗಾರಿಗೆ ಯಾವುದೇ ಅಡಚಣೆ ಇಲ್ಲ. ಸದ್ಯದ ಮಾರ್ಗಸೂಚಿಯನ್ನೇ ಅನುಸರಿಸಲಾಗುತ್ತಿದೆ. ಅದಕ್ಕೂ ಎತ್ತರ ಇರುವು ಕಡೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ನ್ಯಾಯಾಲಯ ಮತ್ತು ತಜ್ಞರ ತಂಡದಿಂದ ಯಾವ ಅಭಿಪ್ರಾಯ ಬರಲಿದೆ ಎಂಬುದನ್ನು ನೋಡಿಕೊಂಡು ಮುಂದುವರಿಯಲಾಗುವುದು’ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದರು.

ಇದರ ಹೊರತಾಗಿ ವಿಮಾನ ನಿಲ್ದಾಣ ಮಾರ್ಗದ ಮೆಟ್ರೊ ರೈಲು ಕಾಮಗಾರಿ ಮುಂದುವರಿಯುತ್ತಿದೆ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT