ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಿಂಗಳಲ್ಲಿ ಚರಕ ಆಸ್ಪತ್ರೆ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ

Published : 7 ಆಗಸ್ಟ್ 2024, 1:31 IST
Last Updated : 7 ಆಗಸ್ಟ್ 2024, 1:31 IST
ಫಾಲೋ ಮಾಡಿ
Comments

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಚರಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೌರಿಂಗ್ ಆಸ್ಪತ್ರೆಯ ಡೆಂಗಿ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ, ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆ ಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿ ದ್ದಾರೆಯೆ? ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೆ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಅಲ್ಲಿಂದ ಶಿವಾಜಿನಗರದ ಚರಕ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಶರಣ ಪ್ರಕಾಶ ಪಾಟೀಲ, ‘ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಬೌರಿಂಗ್ ಆಸ್ಪತ್ರೆಯ ಪಾರಂಪರಿಕ ಕಟ್ಟಡ ಮಾತ್ರ ಉಳಿಸಿಕೊಂಡು ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. 500 ಹಾಸಿಗೆ ಸಾಮರ್ಥ್ಯದ ಹತ್ತು ಅಂತಸ್ತಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ಹೇಳಿದರು. 

‘₹287 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಗಡುವು ನೀಡಲಾಗಿದೆ’ ಎಂದರು.

ಚರಕ ಆಸ್ಪತ್ರೆ ಶೀಘ್ರ ಉದ್ಘಾಟನೆ: ‘ಚರಕ ಆಸ್ಪತ್ರೆಯನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು. ಬಿಬಿಎಂಪಿ ಈ ಕಟ್ಟಡ ನಿರ್ಮಿಸಿದೆ. ಇನ್ಫೊಸಿಸ್‌ ಮೂಲಸೌಲಭ್ಯ ಒದಗಿಸಿದೆ. ಹೃದಯ ಸಂಬಂಧಿ, ನರರೋಗ, ನೆಫ್ರಾಲಜಿ ಸೇರಿದಂತೆ ಎಲ್ಲ ಚಿಕಿತ್ಸೆ ನೀಡಲಾಗುವುದು. ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಸಿಗಲಿದೆ’ ಎಂದು ಸಚಿವರು ಮಾಹಿತಿ ನೀಡಿದರು.

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT