₹24.38 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ವತಿಯಿಂದ 2020ರಲ್ಲಿಯೇ ನಿರ್ಮಿಸಲಾಗಿದ್ದ ಈ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಯ ನೇಮಕಾತಿ ಆಗಿರಲಿಲ್ಲ. ಹೀಗಾಗಿ ಕಾರ್ಯಾರಂಭಗೊಂಡಿರಲಿಲ್ಲ. ಆಸ್ಪತ್ರೆ ನಿರ್ಮಾಣಕ್ಕೆ ಸಹಯೋಗ ನೀಡಿದ್ದ ಇನ್ಫೊಸಿಸ್ ಫೌಂಡೇಷನ್, ಅಗತ್ಯ ಯಂತ್ರೋಪಕರಣ, ಹಾಸಿಗೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಲು ₹11 ಕೋಟಿ ದೇಣಿಗೆ ನೀಡಿತ್ತು. ಈ ಆಸ್ಪತ್ರೆಯನ್ನು ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಿಕೊಳ್ಳಲಾಗಿತ್ತು.