ಶನಿವಾರ, ಸೆಪ್ಟೆಂಬರ್ 25, 2021
22 °C

ಚರಣ್ ಬಿ.ಇಡಿ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಡಿ: ಬೆಂಗಳೂರು ನಗರ ವಿಶ್ವವಿದ್ಯಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಲಸೂರಿನ ಕೇಂಬ್ರಿಜ್‌ ಬಡಾವಣೆಯಲ್ಲಿರುವ ಚರಣ್‌ ಬಿ.ಇಡಿ ಕಾಲೇಜಿನಲ್ಲಿ ಯಾವ ವಿದ್ಯಾರ್ಥಿಗಳೂ ಪ್ರವೇಶ ಪಡೆಯಬಾರದು ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

‘ಈ ಕಾಲೇಜು ಎನ್‌ಸಿಟಿಇಯಿಂದ ಅನುಮೋದನೆ ಪಡೆದಿರುವುದಾಗಿ ಸುಳ್ಳು ಪ್ರಮಾಣ ಪತ್ರವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದೆ. ಕಾಲೇಜಿನ ಸಂಯೋಜನೆಯನ್ನು ರದ್ದುಗೊಳಿಸುವಂತೆ ವಿವಿಧ ಪ್ರಾಧಿಕಾರಗಳಿಗೆ ಶಿಫಾರಸು ಮಾಡಲಾಗಿದ್ದು, ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಹೇಳಿದ್ದಾರೆ.

‘ಈ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಲ್ಲಿ ಸಂಯೋಜನೆಗೊಂಡಿರುವ ಇತರೆ ಐದು ಕಾಲೇಜುಗಳಿಗೆ ವರ್ಗಾವಣೆ ಮಾಡಲು ಸೂಚಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು