ಸೋಮವಾರ, ಮಾರ್ಚ್ 30, 2020
19 °C

ವೈರಸ್‌ಗಳ ವಿರುದ್ಧ ಹೋರಾಟ ಅನಿವಾರ್ಯ: ಮೇಜರ್ ಜನರಲ್ ಜಿ.ಡಿ.ಬಕ್ಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಈವರೆಗೂ ಯುದ್ಧ ಅಥವಾ ಹೋರಾಟಗಳ ಮೂಲಕ ದೇಶ ರಕ್ಷಣೆ ಕಾರ್ಯ ನಡೆಯಿತು. ಈಗ ವೈರಸ್‌ಗಳ ವಿರುದ್ಧ ಹೋರಾಟ ಮಾಡಬೇಕಾಗಿದೆ. ಕೋವಿಡ್‌–19 ವೈರಸ್‌ನಿಂದ ರಕ್ಷಿಸಿಕೊಳ್ಳಲು ಹೋರಾಟ ಮಾಡಬೇಕು’ ಎಂದು ನಿವೃತ್ತ ಮೇಜರ್‌ ಜನರಲ್‌ ಜಿ.ಡಿ. ಬಕ್ಷಿ ಹೇಳಿದರು. 

ನಗರದಲ್ಲಿ ಶುಕ್ರವಾರ ರಾಜ್ಯ ಲೆಕ್ಕಪರಿಶೋಧಕರ ಸಂಸ್ಥೆಯ 32ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ‘ಸೇನೆಗೆ ಸೇರುವುದು ಪೂರ್ವಜನ್ಮದ ಪುಣ್ಯ. ಭಾರತ ಮಾತೆಯನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗುವುದು ಒಂದು ಸುವರ್ಣಾವಕಾಶ’ ಎಂದರು. 

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ‘1957ರಲ್ಲಿ ಕರ್ನಾಟಕದಲ್ಲಿ ಆರಂಭಗೊಂಡ ಈ ಸಂಸ್ಥೆ 64 ವರ್ಷಗಳನ್ನು ಪೂರ್ಣಗೊಳಿಸಿದೆ. ಸಂಸ್ಥೆಯು ನಿರಂತರವಾಗಿ ವಿಚಾರ ಸಂಕಿರಣಗಳು, ಲೆಕ್ಕಪರಿಶೋಧಕರಿಗೆ ಉಪನ್ಯಾಸ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು