ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಕೂಡ್ಲಿ ಶೃಂಗೇರಿ ಮಠದ ವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ ಇಂದಿನಿಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠದ ನೂತನ ಪೀಠಾಧಿಪತಿ ವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯ ಜುಲೈ 24ರಂದು ಮಠದಲ್ಲಿ ನಡೆಯಲಿದೆ.

ಆಷಾಢ ಮಾಸದ ಹುಣ್ಣಿಮೆಯಂದು ಚಾತುರ್ಮಾಸ್ಯ ವ್ರತ ಆರಂಭಿಸಲಿದ್ದಾರೆ. ಭಾದ್ರಪದ ಮಾಸದ ಸೆಪ್ಟೆಂಬರ್ ತಿಂಗಳ ಹುಣ್ಣಿಮೆ ದಿನದಂದು ಸೀಮೊಲ್ಲಂಘನ ಮಾಡುವ ಮೂಲಕ ವ್ರತ ಮುಕ್ತಾಯಗೊಳಿಸಲಿದ್ದಾರೆ.

ಚಾತುರ್ಮಾಸ್ಯದ ಅವಧಿಯಲ್ಲಿ ಭಕ್ತರಿಗೆ ಸ್ವಾಮೀಜಿ ಮಠದಲ್ಲಿ ದರ್ಶನ ನೀಡಲಿದ್ದಾರೆ. ವ್ರತಾಚರಣೆ ವೇಳೆ ವಿವಿಧ ಧಾರ್ಮಿಕ, ಪ್ರವಚನಾದಿ ಕೈಂಕರ್ಯಗಳು ನಡೆಯಲಿವೆ. ಭಕ್ತಾದಿಗಳು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.