ಬೆಂಗಳೂರು: ‘ಸಾಧನೆಯ ಬಲದಿಂದ ಚುನಾವಣೆಗಳನ್ನು ಗೆಲ್ಲಲಾಗದ ರಾಜ್ಯದಲ್ಲಿರುವ ಮತಿಹೀನ ಬಿಜೆಪಿ ಸರ್ಕಾರ, ನಿಗಮ–ಪ್ರಾಧಿಕಾರ ರಚಿಸುವಂಥ ಅಗ್ಗದ ತಂತ್ರ ನಡೆಸಿ ಸಮಾಜ ಒಡೆಯಲು ಹೊರಟಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನು ಓದಿ:ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

‘ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನವೂ ಹೌದು’ ಎಂದು ಪ್ರತಿಪಾದಿಸಿರುವ ಅವರು, ’ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

‘ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿ ಅವರು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಒಪ್ಪಿಕೊಂಡು ಕಾರ್ಯಕ್ರಮ ರೂಪಿಸಲಿ’ ಎಂದು ಅವರು ಆಗ್ರಹಿಸಿದ್ದಾರೆ.

‘ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ; ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಹೇಳಿದ್ದಾರೆ.

‘ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ. ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ. ಇವೆಲ್ಲಕ್ಕೂ ಪರಿಹಾರ ಕಲ್ಪಿಸಲು ಸರ್ಕಾರದ ಬಳಿ ಹಣ ಇಲ್ಲ. ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು’ ಎಂದು ಅವರು ಪ್ರಶ್ನಿಸಿದ್ದಾರೆ.

‘ಕನ್ನಡಿಗರನ್ನು ಕೆರಳಿಸಬೇಡಿ’

‘ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಿಸಿರುವ ಸರ್ಕಾರ, ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯದಾದ್ಯಂತ ಎರಡೂ ಸಮುದಾಯಗಳು ಸೌಹಾರ್ದದಿಂದ ಬದುಕುತ್ತಿವೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ’ ಎಂದವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.