ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸಿಗೆ, ರೆಮ್‌ಡಿಸಿವಿರ್ ಹೆಸರಿನಲ್ಲಿ ವಂಚನೆ

Last Updated 17 ಜೂನ್ 2021, 16:39 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ರೋಗಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಹಾಸಿಗೆ ಕೊಡಿಸಿ ಚಿಕಿತ್ಸೆಗೆ ಅಗತ್ಯವಿರುವ ರೆಮ್‌ಡಿಸಿವಿರ್ ಚುಚ್ಚುಮದ್ದು ನೀಡುವುದಾಗಿ ಹೇಳಿ ಹಣ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಲ್ಯಾಣನಗರದ 37 ವರ್ಷದ ನಿವಾಸಿಯಾಗಿರುವ ಎಂಜಿನಿಯರೊಬ್ಬರು ದೂರು ನೀಡಿದ್ದಾರೆ. ಆರೋಪಿ ವಿಶ್ವ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ‍ಪೊಲೀಸ್ ಮೂಲಗಳು ಹೇಳಿವೆ.

‘ಹಾಸಿಗೆಗಾಗಿ ಹುಡುಕಾಟ ನಡೆಸುತ್ತಿದ್ದ ದೂರುದಾರ, ಮೊಬೈಲ್ ಮೂಲಕ ಆರೋಪಿಯನ್ನು ಸಂಪರ್ಕಿಸಿದ್ದರು. ‘ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆ ಒದಗಿಸಿ, ರೆಮ್‌ಡಿಸಿವಿರ್ ಚುಚ್ಚುಮದ್ದು ವ್ಯವಸ್ಥೆ ಮಾಡುತ್ತೇನೆ. ಅದಕ್ಕಾಗಿ ಮುಂಗಡವಾಗಿ ಹಣ ಪಾವತಿ ಮಾಡಬೇಕು’ ಎಂದು ಆರೋಪಿ ಹೇಳಿದ್ದ.’

‘ಆರೋಪಿ ಮಾತು ನಂಬಿದ್ದ ದೂರುದಾರ, ಆತ ಹೇಳಿದ್ದ ಬ್ಯಾಂಕ್ ಖಾತೆಗೆ ₹ 38 ಸಾವಿರ ಹಾಕಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT