ಬೆಂಗಳೂರು: ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ.

ಸುಮಾರು ₹10 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪಿಗಳಾದ ಸುಧಾ ಮತ್ತು ಸಿದ್ದಾಚಾರಿ ದಂಪತಿಯ ವಿರುದ್ಧ ದೂರು ನೀಡಲಾಗಿದ್ದು, ಒಂದು ತಿಂಗಳು ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿ, ನ್ಯಾಯ ಕೊಡಿಸಬೇಕು ಎಂದು ವಂಚನೆಗೊಳಗಾದವರು ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ: ಜೆ.ಪಿ. ನಗರದ 6ನೇ ಹಂತದ ಜರಗನಹಳ್ಳಿಯಲ್ಲಿ ವಾಸವಾಗಿದ್ದ ಸುಧಾ ಹಾಗೂ ಸಿದ್ಧಾಚಾರಿ ದಂಪತಿ 20 ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ದಂಪತಿಯನ್ನು ನಂಬಿ ಸುಮಾರು 300ಕ್ಕೂ ಅಧಿಕ ಜನ ₹5 ಲಕ್ಷ ಹಾಗೂ ₹10 ಲಕ್ಷದ ಚೀಟಿಯಲ್ಲಿ ಹಣ ಹೂಡಿದ್ದರು. ಆದರೆ ಒಂದು ವರ್ಷದಿಂದ ದಂಪತಿ, ಚೀಟಿ ಹಣ ನೀಡದೆ ಸತಾಯಿಸುತ್ತಿದ್ದರು. ಜೂನ್ 3ರಂದು ರಾತ್ರಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದರು. ಹಣ ಕಳೆದುಕೊಂಡು ಕಂಗಾಲಾದ ಸ್ಥಳೀಯರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದರು.

ಆರೋಪಿಗಳು ನೂರಾರು ಜನರಿಗೆ ₹10 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಅವರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.