ಬೆಂಗಳೂರು: ಫೆಡಕ್ಸ್ ಹಾಗೂ ಡಿ.ಎಚ್.ಎಲ್ ಇಂಟರ್‌ನ್ಯಾಷನಲ್ ಕೊರಿಯರ್ ಕಂಪನಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ₹30 ಲಕ್ಷ ವಂಚನೆ ಮಾಡಿದ್ದ ಮೂವರು ಆರೋಪಿಗಳನ್ನು ದಕ್ಷಿಣ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಮುಕರ‍್ರಮ್, ಮನ್ಸೂರ್ ಮತ್ತು ಇಬ್ರಾಹಿಂ ಎಂಬುವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳು, ಎಟಿಎಂ ಕಾರ್ಡ್ ಮತ್ತು ₹11.75 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ನಾಲ್ವರ ಪತ್ತೆಗೆ ಶೋಧ ನಡೆಯುತ್ತಿದೆ. ಮುಕರ‍್ರಮ್ ಸಂಚಿನ ಸೂತ್ರಧಾರಿಯಾಗಿದ್ದು, ಇಬ್ರಾಹಿಂ ಹಣವನ್ನು ಬೆಂಗಳೂರಿನಿಂದ ಹವಾಲಾ ಮಾರ್ಗದ ಮೂಲಕ ದುಬೈಗೆ ವರ್ಗಾಯಿಸಲು ಸಹಾಯ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

‘ಜೂನ್ 24ರಂದು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್ ನಿವಾಸಿಗೆ ಡಿ.ಎಚ್.ಎಲ್ ಕೊರಿಯರ್ ಕಂಪನಿ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ‘ಶಾಂಘೈನಿಂದ ನಿಮ್ಮ ಹೆಸರಿಗೆ ಬಂದಿರುವ ಕೊರಿಯರ್ ಪಾರ್ಸೆಲ್‌ನಲ್ಲಿ ಐದು ಪಾಸ್‌ಪೋರ್ಟ್, ಬ್ಯಾಂಕ್ ಕ್ರೆಡಿಟ್ ಕಾರ್ಡ್ಸ್, ಮಾದಕ ವಸ್ತುಗಳು ಇವೆ. ಹಾಗಾಗಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳು ತನಿಖೆ ಮಾಡುತ್ತಾರೆ’ ಎಂದು ಹೇಳಿ, ಮತ್ತೊಬ್ಬ ಅಧಿಕಾರಿಗೆ ಫೋನ್ ನೀಡಿದ್ದ’ ಎಂದು ಪೊಲೀಸರು ಹೇಳಿದರು.

‘ಸ್ವಲ್ಪ ಹೊತ್ತಿನ ಬಳಿಕ ಸ್ಕೈಪ್ ಮೂಲಕ ದೂರುದಾರರಿಗೆ ಕರೆ ಮಾಡಿದ ವ್ಯಕ್ತಿ, ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡು, ‘ನಿಮ್ಮ ಬ್ಯಾಂಕ್ ಖಾತೆಯಿಂದ ಹವಾಲಾ ವಹಿವಾಟು ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ಗೃಹಬಂಧನದಲ್ಲಿ ಇರಬೇಕು ಎಂದು ಹೇಳಿದ್ದಾನೆ. ಅದರಂತೆ ದೂರದಾರರು ಕೆಂಗೇರಿಯ ಗುಬ್ಬಲಾಳದಲ್ಲಿರುವ ಗ್ಲೋಬಲ್ ಸ್ಟೇ ನಲ್ಲಿ ಬಾಡಿಗೆ ಕೊಠಡಿ ಪಡೆದು ಹತ್ತು ದಿನ ಗೃಹ ಬಂಧನಲ್ಲಿರುತ್ತಾರೆ’ ಎಂದು ವಿವರಿಸಿದರು.

‘ಆರೋಪಿಗಳು ಹೇಳಿದ ಬ್ಯಾಂಕ್ ಖಾತೆಗಳಿಗೆ ಅವರು ₹30 ಲಕ್ಷ ನಗದು ವರ್ಗಾವಣೆ ಮಾಡುತ್ತಾರೆ. ಈ ವಿಷಯವನ್ನು ಯಾರ ಜೊತೆಗೂ ಚರ್ಚಿಸಬಾರದು ಎಂದು ಹೇಳಿರುತ್ತಾರೆ. ಕುಟುಂಬದ ಸದಸ್ಯರು ಅವರನ್ನು ಸಂಪರ್ಕಿಸಿ, ಚರ್ಚಿಸಿದಾಗ ವಂಚನೆ ಆಗಿರುವುದು ಗೊತ್ತಾಗುತ್ತದೆ’ ಎಂದು ಹೇಳಿದರು.

ಪ್ರಕರಣ ದಾಖಲಿಸಿಕೊಂಡ ಸೆನ್ ಠಾಣೆ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದರು. ಬೆಂಗಳೂರಿನ ವ್ಯಕ್ತಿಯೊಬ್ಬರ ಖಾತೆಗೆ ಹಣ ಜಮಾ ಆಗಿರುವುದು ತನಿಖೆ ವೇಳೆ ಗೊತ್ತಾಗುತ್ತದೆ. ಬಳಿಕ ಮೂವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ವಂಚನೆ ಮಾಡಿರುವುದನ್ನು ಒಪ್ಪಿಕೊಂಡರು. ಆರೋಪಿಗಳಿಂದ ₹11.75 ಲಕ್ಷ ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.