ಎಂಬಿಬಿಎಸ್ ಸೀಟು ಆಮಿಷವೊಡ್ಡಿ ವಂಚನೆ
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಜೆ.ಪಿ.ನಗರದ ನಟರಾಜ್ ಬಡಾವಣೆಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಲ್ಲುರಿ ರಾಜು ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ದೂರುದಾರರು ತಮ್ಮ ತಂಗಿಯನ್ನು ಎಂಬಿಬಿಎಸ್ ವ್ಯಾಸಂಗಕ್ಕೆ ಸೇರಿಸಲು ಪ್ರಯತ್ನಿಸುತ್ತಿದ್ದರು. ಅದಕ್ಕಾಗಿ ಹಲವು ಕಾಲೇಜುಗಳಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲುರಿ ರಾಜು ಹೆಸರು ಹೇಳಿಕೊಂಡು ದೂರುದಾರರಿಗೆ ಕರೆ ಮಾಡಿದ್ದ ಆರೋಪಿ, ಸುಲಭವಾಗಿ ಎಂಬಿ
ಬಿಎಸ್ ಸೀಟು ಕೊಡಿಸುವುದಾಗಿ ಹೇಳಿದ್ದ. ಅದಕ್ಕೆ ಹಣ ಖರ್ಚಾಗುವುದಾಗಿಯೂ ತಿಳಿಸಿದ್ದ.’
‘ಆರೋಪಿ ಮಾತು ನಂಬಿದ್ದ ದೂರು
ದಾರರು, ಹಂತ ಹಂತವಾಗಿ ₹ 2.37 ಲಕ್ಷ ನೀಡಿದ್ದರು. ಆದರೆ, ಆರೋಪಿ ಯಾವುದೇ ಸೀಟು ಕೊಡಿಸಿಲ್ಲ. ಹಣ
ವನ್ನೂ ವಾಪಸು ನೀಡದೇ ನಾಪತ್ತೆಯಾಗಿದ್ದಾನೆ’ ಎಂದು ವಿವರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.