ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಷ್ಟಗಳ ಪರಿಹಾರಕ್ಕಾಗಿ ಪೂಜೆ ಹೆಸರಿನಲ್ಲಿ ₹ 9.30 ಲಕ್ಷ ವಂಚನೆ

Last Updated 12 ಅಕ್ಟೋಬರ್ 2020, 20:39 IST
ಅಕ್ಷರ ಗಾತ್ರ

ಬೆಂಗಳೂರು: ಕಷ್ಟಗಳ ಪರಿಹಾರಕ್ಕಾಗಿ ಪೂಜೆ ಮಾಡುವುದಾಗಿ ಹೇಳಿದ್ದ ವ್ಯಕ್ತಿಯೊಬ್ಬ, ನಗರದ ನಿವಾಸಿ ತುಷಾರ್ ಎಂಬುವರಿಂದ ₹ 9.30 ಲಕ್ಷ ಪಡೆದು ವಂಚಿಸಿದ್ದಾನೆ. ಈ ಸಂಬಂಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಷ್ಟಗಳ ಪರಿಹಾರಕ್ಕಾಗಿ ತುಷಾರ್, ಗೂಗಲ್‌ ಜಾಲತಾಣದಲ್ಲಿ ಹುಡುಕಾಟ ನಡೆಸಿದ್ದರು. ಅಘೋರಿ ಡಾಟ್ ಬಾಬಾ ಜಾಲತಾಣದಲ್ಲಿ ಸಂಪರ್ಕ ಸಂಖ್ಯೆ ಸಿಕ್ಕಿತ್ತು. ಅದಕ್ಕೆ ಕರೆ ಮಾಡಿದ್ದ ತುಷಾರ್, ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದರು’ ಎಂದು ಪೊಲೀಸರು ಹೇಳಿದರು.

‘ದೀಪಕ್ ಬಾಬಾ ಎಂದು ಪರಿಚಯಿಸಿಕೊಂಡಿದ್ದ ವಂಚಕ, ‘ನಿಮ್ಮ ಸಮಸ್ಯೆಗೆ ಪರಿಹಾರ ಬೇಕಾದರೆ ಪೂಜೆ ಮಾಡಿಸಬೇಕು. ಅದಕ್ಕೆ ಹಣ ಖರ್ಚಾಗುತ್ತದೆ’ ಎಂದಿದ್ದ. ಅದನ್ನು ನಂಬಿದ್ದ ತುಷಾರ್, ಆರೋಪಿ ಸೂಚಿಸಿದ್ದ ಖಾತೆಗೆ ₹ 9.30 ಲಕ್ಷ ಹಣ ಹಾಕಿದ್ದರು. ಅದಾದ ನಂತರ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT