ಗುರುವಾರ , ಮೇ 26, 2022
30 °C

ಮದುವೆಯಾಗುವುದಾಗಿ ವಂಚನೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಯುವಕನೊಬ್ಬ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಸಂತ್ರಸ್ತೆ ನೀಡಿದ ದೂರು ಆಧರಿಸಿ ಚಂದನ್‌(26) ಎಂಬಾತನನ್ನು  ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

‘ಮೂರು ವರ್ಷದ ಹಿಂದೆ ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಯವಾಗಿದ್ದರು. ಇಬ್ಬರ ನಡುವೆ ಆರಂಭವಾಗಿದ್ದ ಸ್ನೇಹ ಪ್ರೀತಿಗೆ ತಿರುಗಿತ್ತು. ಚಂದನ್‌ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ’.

‘ಮದುವೆಗೆಂದು ಸಂತ್ರಸ್ತೆಯಿಂದಲೇ ಲಕ್ಷಾಂತರ ಹಣ ಪಡೆದು, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಇದರಿಂದ ಮನನೊಂದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಆರೋಪಿ ಚಂದನ್‌ನನ್ನು ಕೂಡಲೇ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು