ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಬೌನ್ಸ್ ಪ್ರಕರಣ: ಸಚಿವ ನಾಗೇಂದ್ರ ವಿರುದ್ಧ ಜಾಮೀನು ರಹಿತ ಬಂಧನಾಜ್ಞೆ

Published 7 ಅಕ್ಟೋಬರ್ 2023, 16:02 IST
Last Updated 7 ಅಕ್ಟೋಬರ್ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಸ್‌ಎಲ್ ಸ್ಟೀಲ್ಸ್ ಕಂಪನಿ ಮ್ಯಾನೇಜರ್ ರಾಘವೇಂದ್ರ ಘೋಡ್ಕೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಶನಿವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದ್ದಾರೆ.

ಈ ಮೊದಲು ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಕೋರ್ಟ್‌ಗೆ ಗೈರಾದ ಕಾರಣ ಆರೋಪಿ ನಾಗೇಂದ್ರ ಅವರನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲು ಆದೇಶಿಸಲಾಗಿದೆ.

ವಿಚಾರಣೆಯನ್ನು ಅ. 31ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಮೂರನೇ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT