ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್, ಗೇಮ್ ಝೋನ್‌ಗಳ ಸುರಕ್ಷತಾ ಕ್ರಮ ಪರಿಶೀಲಿಸಿ: ಡಿ.ಕೆ. ಶಿವಕುಮಾರ್‌

ಬಿಬಿಎಂಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪತ್ರ
Published 26 ಮೇ 2024, 18:02 IST
Last Updated 26 ಮೇ 2024, 18:02 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಝೋನ್ಸ್‌, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ಗೆ ಪತ್ರ ಬರೆದಿದ್ದಾರೆ.

‘ಗುಜರಾತಿನ ರಾಜ್‌ಕೋಟ್‌ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಭವಿಸಿರುವ ಅಗ್ನಿ ಅವಘಡ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದೆ. ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು ಎಂದು ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT