ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಟೆಗಾರರು ಸೆರೆಯಾದ ಕ್ಯಾಮೆರಾದಲ್ಲೇ ಚಿರತೆಗಳು ಸೆರೆ

Last Updated 26 ಏಪ್ರಿಲ್ 2020, 19:34 IST
ಅಕ್ಷರ ಗಾತ್ರ

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಅಂಚಿನಲ್ಲಿರುವ ರಾಗಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಜೈಪುರ ದೊಡ್ಡಿ ಎಂಬಲ್ಲಿ ಎರಡು ಚಿರತೆಗಳು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಇದೇ ಕ್ಯಾಮೆರಾದಲ್ಲಿ 10 ದಿನಗಳ ಹಿಂದೆ ಇಬ್ಬರು ಬೇಟೆಗಾರರು ಕೋವಿಯನ್ನು ಹೆಗಲಿಗೇರಿಸಿಕೊಂಡು ಅಡ್ಡಾಡುತ್ತಿದ್ದ ದೃಶ್ಯ ಸೆರೆಯಾಗಿತ್ತು. ಚಿರತೆಗಳು ಓಡಾಡುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ‘ಪ್ರಜಾವಾಣಿ’ ಜೊತೆ ಹಂಚಿಕೊಂಡಿದ್ದಾರೆ.

‘ತೋಟದ ಅಂಚಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯದಲ್ಲಿ ಚಿರತೆಗಳು ಓಡಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಒಂದು ಗಂಡು ಚಿರತೆ ಇನ್ನೊಂದು ಹೆಣ್ಣು ಚಿರತೆ ಬೇರೆ ಬೇರೆ ಸಮಯದಲ್ಲಿ ಅಡ್ಡಾಡಿವೆ. ಈ ದೃಶ್ಯ ಈ ಪರಿಸರದಲ್ಲಿ ವನ್ಯಜೀವಿಗಳು ಎಷ್ಟು ಹೇರಳವಾಗಿವೆ ಎಂಬುದನ್ನು ಬಿಂಬಿಸುತ್ತವೆ’ ಎಂದು ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಇತ್ತೀಚೆಗೆ ಇಲ್ಲಿನ ಕಾಡುಗಳಲ್ಲಿ ಕಳ್ಳಬೇಟೆ ಹೆಚ್ಚುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಕಡಿವಾಣ ಹಾಕಬೇಕು.ಆಗಮಾತ್ರ ಇಲ್ಲಿನ ಸಮೃದ್ಧ ವನ್ಯಜೀವಿ ಸಂಪತ್ತನ್ನು ರಕ್ಷಿಸಲು ಸಾಧ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT