ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುವಕನ ಮೇಲೆ ರಾಸಾಯನಿಕ ಎರಚಿ ಪರಾರಿ

Published : 23 ಸೆಪ್ಟೆಂಬರ್ 2024, 22:19 IST
Last Updated : 23 ಸೆಪ್ಟೆಂಬರ್ 2024, 22:19 IST
ಫಾಲೋ ಮಾಡಿ
Comments

ಬೆಂಗಳೂರು: ಯುವಕನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಶೌಚಾಲಯ ಶುಚಿಗೊಳಿಸುವ ರಾಸಾಯನಿಕ ಎರಚಿರುವ ಘಟನೆ ಭಾನುವಾರ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸಣ್ಣಕ್ಕಿ ಬಯಲಿನ ಬಾಲಾಜಿ ವೈನ್ಸ್ ಸ್ಟೋರ್ ಬಳಿ ನಡೆದಿದೆ.

ನಾಗೇಶ್ ಕೊಂಡಾ (21) ಎಂಬುವರ ಎಡಗಣ್ಣಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ.

ವೃಷಭಾವತಿ ನಗರದಲ್ಲಿರುವ ಕಾರ್ಖಾನೆಯೊಂದರಲ್ಲಿ ಫಿಟ್ಟರ್ ಆಗಿ ನಾಗೇಶ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸಕ್ಕೆ ರಜೆ ಇದ್ದ ಕಾರಣ ವೈನ್‌ ಸ್ಟೋರ್‌ಗೆ ಬಂದು ಮದ್ಯ ಸೇವಿಸಿ, ಊಟ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಮದ್ಯದಂಗಡಿ ಬಳಿ ಬಂದ ದುಷ್ಕರ್ಮಿ, ನಾಗೇಶ್ ಮುಖಕ್ಕೆ ರಾಸಾಯನಿಕ ಎರಚಿ ಪರಾರಿಯಾಗಿದ್ದಾನೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸದ್ಯ ಗಾಯಾಳುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT