ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಸೌಲಭ್ಯವನ್ನು ಪರಿಚಯಿಸಲಾಗುತ್ತದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಹೆಣ್ಣೂರು ರಸ್ತೆಯಲ್ಲಿ ಸ್ಪರ್ಶ್ ಆಸ್ಪತ್ರೆಯ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಈ ಸೌಲಭ್ಯವನ್ನು ಪ್ರಾರಂಭಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟ, ಆದರೆ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮಾತನಾಡಿ, ‘ನಮ್ಮ ರಾಜ್ಯದಲ್ಲಿ ಬಡ ಮಕ್ಕಳೂ ಸಹ ವೈದ್ಯರಾಗಬೇಕು ಎಂಬ ಕನಸು ನನಸು ಆಗುತ್ತಿದೆ. ಸರ್ಕಾರಿ ಕೋಟಾದಡಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಕೋಟಾದಡಿ ಹೆಚ್ಚು ವೈದ್ಯಕೀಯ ಸೀಟುಗಳನ್ನು ಮೀಸಲಿಡಲಾಗಿದೆ’ ಎಂದರು.

ಸ್ಪರ್ಶ್ ಆಸ್ಪತ್ರೆ ಸಮೂಹದ ಅಧ್ಯಕ್ಷ ಡಾ. ಶರಣ್ ಶಿವರಾಜ ಪಾಟೀಲ ಮಾತನಾಡಿ, ‘ಹೆಣ್ಣೂರಿನಲ್ಲಿ ನೂತನವಾಗಿ ಉದ್ಘಾಟಿಸಿರುವ ಸ್ಪರ್ಶ್ ಆಸ್ಪತ್ರೆಯೂ 300 ಹಾಸಿಗೆ ಸಾಮರ್ಥ್ಯ ಹೊಂದಿದೆ. ಈ ಆಸ್ಪತ್ರೆಯು ಮೂಳೆ, ನರ ವಿಜ್ಞಾನ, ಹೃದ್ರೋಗ ವಿಭಾಗ, ಕ್ಯಾನ್ಸರ್ ಚಿಕಿತ್ಸೆ ಸೇರಿದಂತೆ ಅಂಗಾಂಗ ಕಸಿ ವಿಭಾಗಗಳನ್ನು ಒಳಗೊಂಡಿದೆ. ಮಹಿಳೆಯರು ಮತ್ತು ಮಕ್ಕಳಿಗಾಗಿ ಪ್ರತ್ಯೇಕ ಕೇಂದ್ರಗಳಿವೆ. ಇಲ್ಲಿ ರೊಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನ ಹಾಗೂ 3ಡಿ ಮುದ್ರಣ ತಂತ್ರಜ್ಞಾನ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳ ಸೌಲಭ್ಯವಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.