ಶುಕ್ರವಾರ, ಮೇ 27, 2022
28 °C

ಮಾದಕ ವಸ್ತು ಮಾರಾಟ: ಸೂಡಾನ್‌ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೊರದೇಶಗಳಿಂದ ಮಾದಕ ವಸ್ತುಗಳನ್ನು ತಂದು ನಗರದ ವಿವಿಧೆಡೆ ಮಾರಾಟ ಮಾಡುತ್ತಿದ್ದ ಸೂಡಾನ್‌ ದೇಶದ ನಫಿ ಇಬ್ರಾಹಿಂ ಯಾನೆ ಮೊಹಮ್ಮದ್‌ ದಾವೂದ್‌ ಮೊಹಮ್ಮದ್‌ ಗಡಾಂ (22) ಎಂಬಾತನನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 28 ಎಕ್ಸ್‌ಟೆಸಿ ಮಾತ್ರೆಗಳು, ₹2,500 ನಗದು ಹಾಗೂ ಮೊಬೈಲ್‌ ಜಪ್ತಿ ಮಾಡಲಾಗಿದೆ.

‘ನಗರದ ಅರ್ಕಾವತಿ ಬಡಾವಣೆಯಲ್ಲಿ ನೆಲೆಸಿದ್ದ ಆರೋಪಿಯು ಠಾಣೆ ವ್ಯಾಪ್ತಿಯ ದತ್ತಾತ್ರೇಯ ನಗರದ 1ನೇ ಮುಖ್ಯರಸ್ತೆಯಲ್ಲಿರುವ ಕಾಲೇಜೊಂದರ ಬಳಿ ಬಂದಿದ್ದ. ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡಲು ಮುಂದಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ದಾಳಿ ನಡೆಸಿ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು