ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಪೋಸ್ಟರ್‌, ಬ್ಯಾನರ್‌ ತೆರವುಗೊಳಿಸಲು ತಂಡ ರಚನೆ

Published 6 ಮಾರ್ಚ್ 2024, 15:44 IST
Last Updated 6 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಪೋಸ್ಟರ್‌, ಬ್ಯಾನರ್‌ಗಳನ್ನು ತೆರವುಗೊಳಿಸಲು ಈಗಲೇ ತಂಡ ರಚಿಸಿ ತಯಾರಾಗಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿಯವರು ಎಲ್ಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಚುನಾವಣೆ ಘೋಷಣೆಯಾದ 24 ಗಂಟೆ, 48 ಗಂಟೆ, 72 ಗಂಟೆಗಳಲ್ಲಿ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವ ಅನಧಿಕೃತ ಗೋಡೆ ಬರಹ, ಭಿತ್ತಿ ಪತ್ರ, ಬ್ಯಾನರ್‌ಗಳನ್ನು ತೆರವು ಮಾಡಬೇಕಾಗುತ್ತದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲು ತಂಡಗಳನ್ನು ಮುಂಗಡವಾಗಿ ರಚಿಸಿಕೊಳ್ಳಬೇಕು. ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಚುನಾವಣಾಧಿಕಾರಿ ಕಚೇರಿಗೆ ನೀಡಬೇಕು ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT