ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ಅಧಿಕಾರಿ, ಸಿಬ್ಬಂದಿಗೆ ಕೋವಿಡ್‌

Last Updated 15 ಅಕ್ಟೋಬರ್ 2020, 6:37 IST
ಅಕ್ಷರ ಗಾತ್ರ

ಬೆಂಗಳೂರು: ಆನಂದರಾವ್‌ ವೃತ್ತದಲ್ಲಿರುವ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಮುಖ್ಯ ಎಂಜಿನಿಯರ್‌ ಕಚೇರಿಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು 30 ಮಂದಿಗೆ ಕೋವಿಡ್‌ ದೃಢಪಟ್ಟಿದೆ.

ಈ ಕಾರಣದಿಂದ ಕಚೇರಿಯನ್ನು ಗುರುವಾರದಿಂದ (ಅ. 15) ಮೂರು ದಿನ ಸೀಲ್‌ಡೌನ್‌ ಮಾಡಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿಗೆ ಮುಖ್ಯ ಎಂಜಿನಿಯರ್‌ ಮಾಹಿತಿ ನೀಡಿದ್ದಾರೆ.

'ಇಡೀ ಕಚೇರಿಯನ್ನು ಗುರುವಾರ ಸೋಂಕು ನಿವಾರಕದಿಂದ ಸ್ವಚ್ಛಗೊಳಿಸಲಾಗುವುದು. ಕಚೇರಿಯ ಇತರ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಮೂರು ದಿನ ಹೋಮ್‌ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT